ಪುಂಜಾಲಕಟ್ಟೆ : 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆಗೆ ಶೇ. 96 ಫಲಿತಾಂಶ ಲಭಿಸಿದೆ.
ವಿಜ್ಞಾನ ವಿಭಾಗದಲ್ಲಿ ಒಟ್ಟು 51 ವಿದ್ಯಾರ್ಥಿಗಳಲ್ಲಿ 48 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.96 ಫಲಿತಾಂಶ ಲಭಿಸಿದೆ.
ವಾಣಿಜ್ಯ ವಿಭಾಗದಲ್ಲಿ ಒಟ್ಟು131 ವಿದ್ಯಾರ್ಥಿಗಳಲ್ಲಿ 127 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ,97 ಫಲಿತಾಂಶ, ಕಲಾ ವಿಭಾಗದಲ್ಲಿ ಒಟ್ಟು 76 ವಿದ್ಯಾರ್ಥಿಗಳಲ್ಲಿ 72ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.95 ಫಲಿತಾಂಶ ಲಭಿಸಿದೆ.
37 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 167 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಮೋಕ್ಷಾ 560 , ವಾಣಿಜ್ಯ ವಿಭಾಗದಲ್ಲಿ ಭಾಗ್ಯ ಶ್ರೀ 571, ಕಲಾ ವಿಭಾಗದಲ್ಲಿ ಲತಾಶ್ರೀ 572 ಅತ್ಯುತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ,.