April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟ‌ರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ.

ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು ಅಂಗಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.

ಇಂದು ಬೆಳಗ್ಗೆ ಶಟರ್ ಮುರಿದಿರುವುದು ಸ್ಥಳೀಯರು ನೋಡಿ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಠಾಣೆಯ ಪ್ರಮೋದ್, ಕುಶಾಲಪ್ಪ ಯಂ. ಶಿವಾನಂದ, ಗಿರೀಶ್, ಸ್ಥಳಕ್ಕೆ ಆಗಮಿಸಿದ್ದು, ಸುತ್ತ ಮುತ್ತ ಹಾಗೂ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮರ ಪರಿಶೀಲನೆ ಮಾಡಿದ್ದಾರೆ. ಮಧ್ಯ ರಾತ್ರಿ ಸುಮಾರು 1 ರಿಂದ 2 ಗಂಟೆ ಸುಮಾರಿಗೆ, ಮೂವರು ಸೇರಿ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya
error: Content is protected !!