ಕೊಕ್ಕಡ: 2024-2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 69 ಫಲಿತಾಂಶ ಬಂದಿದೆ.
ವಿಜ್ಞಾನ ವಿಭಾಗದಲ್ಲಿ 13 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒರ್ವ ವಿದ್ಯಾಥಿ ಅತ್ಯುತ್ತಮ, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ. ಅನೂಪ್ 498 , ಸೌಮ್ಯ 464 ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ 19 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಇವರಲ್ಲಿ ಫಾತಿಮತ್ ರುಫೈಕ್ 473, ಫಮೀಜಾ 459 ಅಂಕವನ್ನು ಪಡೆದುಕೊಂಡಿದ್ದಾರೆ.