ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ 93.90% ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ ( 73.45%) . ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.
ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ.