
ಬೆಳ್ತಂಗಡಿ: ಆರಂಬೋಡಿ ಗ್ರಾಮದ ಪಾಡ್ಯರು ನಿವಾಸಿ ಸದಾನಂದ ಪೂಜಾರಿಯವರ ಮನೆಗೆ ಮರ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಇಂದು ಸಂಜೆ ಸುರಿದ ಗಾಳಿ ಮಳೆಗೆ ಬ್ರಹತ್ ಗಾತ್ರದ ಹಲಸಿನ ಮರ ಹಾಗೂ ಮೂರು ಅಡಿಕೆ ಮರ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆಗೆ ಹಾನಿಯಾಗಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.