25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

ಮುಂಡಾಜೆ: 2024-2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 105 ವಿದ್ಯಾರ್ಥಿಗಳಲ್ಲಿ 99 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 94.28 ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗದಲ್ಲಿ 74 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 17 ವಿದ್ಯಾರ್ಥಿಗಳು ಅತ್ಯುತ್ತಮ, 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ. ಎಚ್.ಎಂ. ಅನ್ವಿತಾ 564, ತೇಜಸ್ವಿನಿ 559, ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ 31 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 3 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ,
20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ.

ಕಲಾ ವಿಭಾಗದಲ್ಲಿ ಕೆ.ಎನ್. ಧನುಷ್ 570 ಅಂಕವನ್ನು ಪಡೆದುಕೊಂಡಿದ್ದಾರೆ.

Related posts

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!