ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಮಾರಂಭವನ್ನು ಶಾಲಾ ಸಂಚಾಲಕ ಅನಂತ ಪದ್ಮನಾಭ ಭಟ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಶಾಲೆಯಲ್ಲಿ ಕಲಿತಂತಹ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಮರೆಯದೆ ಪಾಲಿಸಿ ಎಂದು ಶುಭ ಹಾರೈಸಿದರು.

ಎಲ್ಲಾ ವಿದ್ಯಾರ್ಥಿಗಳು ಹಣತೆ ಬೆಳಗಿಸಿ ಪ್ರೀತಿ ಮತ್ತು ಮಾನವತೆಯ ಹಾಗೂ ಸತ್ಯದ‌ ಜೊತೆಗೆ ಬದುಕುವ ಪ್ರಮಾಣ ಮಾಡಿದರು. ಮಕ್ಕಳ ಬಾಲ್ಯದಿಂದ ಹಿಡಿದು ಇಲ್ಲಿಯವರೆಗಿನ ವಿಡಿಯೋವನ್ನು ತೋರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ತಮ್ಮ ನೆನಪಿನ ಬುತ್ತಿಯನ್ನು ಅಭಿಪ್ರಾಯದ ಮುಖಾಂತರ ಪ್ರಸ್ತುತ‌ ಪಡಿಸಿದರು. ಅದಾದ ಬಳಿಕ ಶಿಕ್ಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿದಾಯ ಕೂಟದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು. ಬಳಿಕ ಎಲ್ಲ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಜ್ಞಾನದೇಗುಲಕ್ಕೆ ಟಿವಿಯನ್ನು ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಮತಿ ರೇಖಾ ಹಾಗೂ ಶ್ರೀಮತಿ ಅಂಜು ನೆರವೇರಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ರಮಾರಾಜೇಶ್ ವಂದನಾರ್ಪಣೆಯನ್ನು ಗೈದರು .ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಈ ವಿದಾಯ ಕೂಟಕ್ಕೆ ಪ್ರತ್ಯಕ್ಷ ದರ್ಶಿಗಳಾದರು.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya
error: Content is protected !!