April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಈ ಬಗ್ಗೆ ಬೆಳ್ತಂಗಡಿ ತಾಲೂಕು ಗೇರುಕಟ್ಟೆ ನಿವಾಸಿ ದಿವಾಕರ ಆಚಾರ್ಯ ಹಾಗೂ ಜನರ್ದಾನ ಪೂಜಾರಿ ಅರ್ಜಿ ಸಲ್ಲಿಸಿದ್ದು, ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಎ.7ರಂದು ಅರ್ಜಿಯು ವಿಚಾರಣೆಗೆ ಬಂದಿತ್ತು. ಜಿಲ್ಲಾ ಧಾರ್ಮಿಕ ಪರಿಷದ್ ಹಾಗೂ ವ್ಯವಸ್ಥಾಪನ ಸಮಿತಿಗೆ ನೇಮಕವಾಗಿರುವ ಸದಸ್ಯರನ್ನು ಅರ್ಜಿಯಲ್ಲಿ ಪ್ರತಿ ವಾದಿಗಳನ್ನಾಗಿ ಮಾಡಲಾಗಿದೆ. ಪ್ರತಿ ವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ ವಿಚಾರಣೆಯನ್ನು ಎಪ್ರಿಲ್ 21ಕ್ಕೆ ಮುಂದೂಡಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಶಿಫಾರಸ್ಸು ಪತ್ರದಲ್ಲಿ ಸಲ್ಲಿಸಿದ್ದ ಪಟ್ಟಿಯಲ್ಲಿದ್ದದರನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಅದರಂತೆ ಜಿಲ್ಲಾ ಧಾರ್ಮಿಕ ಪರಿಷದ್ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಎಂ. ರಾಘವೇಂದ್ರ, ನೀನಾ ಕುಮಾರ್, ಪಿ. ರೀಟಾ, ಮೋಹಿನಿ, ಹೇಮಂತ್ ಕುಮಾರ್, ಶರತ್ ಕುಮಾರ್, ಎಚ್.ರಾಘವ, ಕೆ.ಹರೀಶ್ ಹಾಗೂ ಬಿ. ಹರೀಶ್ ಕುಮಾರ್ ಅವರನ್ನು ಸಮಿತಿಗೆ ನೇಮಕ ಮಾಡಲಾಗಿದೆ. ಈ ನೇಮಕಾತಿಯು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಗೆ ವಿರುದ್ಧವಾಗಿದೆ. ಆದ್ದರಿಂದ ನೇಮಕಾತಿಯನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Related posts

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya
error: Content is protected !!