ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ ಎ.20ರಿಂದ 23ರ ವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಎ.10ರಂದು ನಡೆಯಿತು.

ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷ ಪೀತಾಂಬರ ಹೇರಾಜೆ, ಪ್ರಧಾನ ಅರ್ಚಕ ರಾಘವೇಂದ್ರ ಭಾಂಗಿಣ್ಣಯ, ಅಧ್ಯಕ್ಷ ರಕ್ಷಿತ್ ಶಿವರಾಂ, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ವಿ. ಆರ್. ನಾಯಕ್ ಮಹಾಬಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬ್ರಹ್ಮಕಲಶೋತ್ಸವ ಸಮಿತಿ ಕುಶಾಲಪ್ಪ ಗೌಡ ಹಾಗೂ ಟ್ರಸ್ಟಿನ ಸರ್ವಸದಸ್ಯರು ಉಪಸ್ಥಿತರಿದ್ದರು.
