ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸತತ ನಾಲ್ಕನೇ ಬಾರಿಗೆ 100% ಫಲಿತಾಂಶ ಬಂದಿರುತ್ತದೆ.
ಒಟ್ಟು ಆರು ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಅಂಕಗಳನ್ನು ಪಡೆದುಕೊಂಡಿದ್ದು, 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಸಿಂಚನ ಹೆಗಡೆ 574, ಸಹನಾ ಎಸ್ ವಾಣಿಜ್ಯ 552, ವಿಜ್ಞಾನದಲ್ಲಿ ಫಾತಿಮತ್ ಅಝ್ಮೀನ 543 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.