ಬೆಳ್ತಂಗಡಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿ , ಬೆಳ್ತಂಗಡಿ ತಾಲೂಕಿನ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇವರು, ಎಕ್ಸಲೆಂಟ್ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅರಸಿನಮಕ್ಕಿಯ ಭಂಡಿಹೊಳೆಯ ಪುರುಷೋತ್ತಮ ತುಳುಪುಳೆ ಮತ್ತು ಜ್ಯೋತಿ ತುಳುಪುಳೆ ದಂಪತಿಯ ಪುತ್ರ.