23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

ಬೆಳ್ತಂಗಡಿ: ಮಣ್ಣಿನ ಹರಕೆಯ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.೧೦ರಂದು ಬೆಳಿಗ್ಗೆ ೮.೪೫ರಿಂದ ದರ್ಶನ ಬಲಿ ಉತ್ಸವ ಊರ ಹಾಗೂ ಪರವೂರ ಭಕ್ತರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ರಾತ್ರಿ 8 ರಿಂದ ದೇವರ ಬಲಿ ಉತ್ಸವ, ಮಷ್ಪರಥೋತ್ಸವ, ನಿತ್ಯಬಲಿ ಉತ್ಸವ, ರಥಕಟ್ಟೆ ಮೊಜೆ, ಮಹಾಪೂಜೆ, ಭೂತಬಲಿ ಹಾಗೂ ಶಯನೋತ್ಸವ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರ್ಯ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 11ರಿಂದ ಸಂಗಮ ಕಲಾವಿದರು ಉಜಿರೆ ಇವರಿಂದ ಗಿರೀಶ್ ಹೊಳ್ಳ ನಿರ್ದೇಶನದ ‘ಕಾಸ್ಟ ಕಸರತ್’ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಎ.6ರಂದು ಗಣವತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ರಾತ್ರಿ ರಂಗ ಪೂಜೆ, ಉತ್ಸವ ಜರಗಿತು ಎ.7ರಂದು ಬೆಳಿಗ್ಗೆ ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ ಅನ್ನಸಂತರ್ವಣೆ ಎ.8ರಂದು 12.30ರಿಂದ ಮಹಾಪೂಜೆ, ನಿತ್ಯಬಲಿ, ಅನ್ನಸಂತ ರ್ವಣೆ, ಸಂಜೆ ಸುರ್ಯಗುತ್ತು ಮನೆಯಿಂದ ಧರ್ಮದೈವಗಳ ಭಂಡಾರವನ್ನು ಮೆರವಣಿಗೆಯಲ್ಲಿ ತರಲಾಯಿತು.

ರಾತ್ರಿ ೮ರಿಂದ ಉತ್ಸವ ಹೊರಟು ವಸಂತಕಟ್ಟೆ ಪೂಜೆ, ಮಹಾಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾತ್ರಿ ೯.೩೦ರಿಂದ ರಾಜ್ಯಪ್ರಶಸ್ತಿ ವಿಜೇತ ತೆಲಿಕೆದ ಬೊಳ್ಳಿ ಡಾ. ದೇವದಾನ್ ಕಾಪಿಕಾಡ್ ರಚಿಸಿ, ನಿದೇಶಿಸಿದ ‘ಏರ್ಲಾ ಗ್ಯಾರಂಟಿ ಅತ್’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು. ಎ.೯ರಂದು ಬೆಳಗ್ಗೆ ಸೊಡರಬಲಿ ಉತ್ಸವ, ಮಧ್ಯಾಹ್ನ ಮಹಾಪೂಜೆ, ಅನ್ನಸಂತ ರ್ವಣೆ ರಾತ್ರಿ ಗಂಟೆ ೮ರಿಂದ ಉತ್ಸವ ಹೊರಟು ಕೆರೆಕಟ್ಟೆ ಪೂಜೆ, ಮಹಾಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾತ್ರಿ ೯.೩೦ಕ್ಕೆ ಕಲರ್ಸ್‌ ಕನ್ನಡ ಖ್ಯಾತಿಯ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಮರಸ್ಕೃತ ಮತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ‘ಸಂಗೀತ ಗಾನ ಸಂಭ್ರಮ’ ನಡೆಯಿತು.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಸತೀಶ್ಚಂದ್ರ ಸುರ್ಯಗುತ್ತು, , ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡ್ವೆಟ್ನಾಯ, ಧನಂಜಯ ಅಜ್ಜಿ ನಡಗುತ್ತು,
ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ್ ಅಜ್ರಿ, ಮುನಿರಾಜ ಅತ್ರಿ, ಪ್ರಸಾದ್ ಹಾಗೂ ಬೃಹತ್ ಸಂಖ್ಯೆಯಲ್ಲಿ ಭಕ್ತಾದಿಗಳು ಕಾರ್ಯಕ್ರಮಗಳಲ್ಲಿ ಉಪಸ್ಥಿತರಿದ್ದರು.

Related posts

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!