ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿಯ ಒಟ್ಟು 103 ವಿದ್ಯಾರ್ಥಿಗಳಲ್ಲಿ 95 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.93 ಫಲಿತಾಂಶ ದಾಖಲಿಸಿದ್ದಾರೆ.
ಒಟ್ಟು ೧೦೩ ವಿದ್ಯಾರ್ಥಿಗಳಲ್ಲಿ ೯೫ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ ೧೦ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, ವಿಜ್ಞಾನ ವಿಭಾಗದ ೪ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.
೬೮ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೧೩ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ ಅನ್ವಿತ ಜೈನ್ ೫೭೬ ಅಂಕ, ಜಿತೇಶ್ ೫೭೩ ಅಂಕ, ವಿಜ್ಞಾನ ವಿಭಾಗದಲ್ಲಿ ತನುಷ್ ೫೩೭ ಅಂಕ ಪಡೆದುಕೊಂಡಿದ್ದಾರೆ.