38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆಯ ಅಂಗವಾಗಿ ಎ.10 ರಂದು ತೋರಣಮುಹೂರ್ತ , ವಿಮಾನಶುದ್ಧಿ, ಭಗವಾನ್ ಮಹಾವೀರ ಸ್ವಾಮಿಗೆ ನವಕಲಾಶಾಭಿಷೇಕ, ಭಗವಾನ್ ಶಾಂತಿನಾಥ ಸ್ವಾಮಿಗೆ 108 ಕಲಶಗಳಿಂದ ಮಹಾಭಿಷೇಕ, ಪದ್ಮಾವತಿ ಅಮ್ಮನವರಿಗೆ ಅಲಂಕಾರ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವಿಶೇಷ ಪೂಜೆ ನಡೆಯಿತು.


ಬಸದಿಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ನೇತೃತ್ವದಲ್ಲಿ ಪ್ರಧಾನ ಅರ್ಚಕ ಕೆ. ಜಯರಾಜ ಇಂದ್ರರು ಮತ್ತು ಸಹಪುರೋಹಿತರಯ ಧಾರ್ಮಿಕ ವಿಧಿ-ವಿಧಾನಗನ್ನು ನೆರವೇರಿಸಿದರು.
ಬಳಿಕ ನಡೆದ ಶಾಂತಿಚಕ್ರ ಆರಾಧನೆಯಲ್ಲಿ 26 ಮಂದಿ ಶ್ರಾವಕರು, ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು.
ಭಗವಾನ್ ಮಹಾವೀರ ತೀರ್ಥಂಕರರ ಜೀವನ-ಸಾಧನೆ ಬಗ್ಯೆ ಉಪನ್ಯಾಸ ನೀಡಿದ ಅಳದಂಗಡಿ ಮಿತ್ರಸೇನ ಜೈನ್, ಮಹಾವೀರ ತೀರ್ಥಂಕರರು  ಬೋಧಿಸಿದ ಅಹಿಂಸೆ, ಅನೇಕಾಂತವಾದ, ಬದುಕು ಮತ್ತು ಬದುಕಲು ಬಿಡು ಮೊದಲಾದ ಉಪದೇಶಗಳು ಸಾರ್ವಜನಿಕ ಮೌಲ್ಯ ಹೊಂದಿವೆ. ಸಕಲ ಪ್ರಾಣಿಪಕ್ಷಿಗಳಿಗೂ ನಮ್ಮಂತೆಯೇ ಬದುಕುವ ಹಕ್ಕಿದೆ. ಮಹಾವೀರರು ಬೋಧಿಸಿದ ತತ್ವಗಳಿಂದ ವಿಶ್ವಶಾಂತಿಯೊಂದಿಗೆ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.


ಕೆ. ಜಯವರ್ಮರಾಜ ಬಳ್ಳಾಲ್, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಬೆಂಗಳೂರಿನ ವಕೀಲ ಕೆ.ಬಿ. ಯುವರಾಜ ಬಳ್ಳಾಲ್, ವಿಜಯಾ ಬ್ಯಾಂಕ್‌ನ  ನಿವೃತ್ತ ಪ್ರಬಂಧಕ ಎಂ. ಜಿನರಾಜ ಶೆಟ್ಟಿ, ಸುಮತಿ ಕೆ.ಆರ್. ಬಳ್ಳಾಲ್ದ, ವಿನಯಾ ಜೆ. ಬಳ್ಳಾಲ್, ಡಾ. ಪ್ರಿಯಾ ಬಳ್ಳಾಲ್ ಮತ್ತು ಮಣಿಮಾಲ ಬಳ್ಳಾಲ್ ಹಾಗೂ ಬಳ್ಳಾಲ್ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya
error: Content is protected !!