ಮಡಾಂತ್ಯಾರು: 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು ಮಡಾಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿಗೆ ಶೇ.95.25 ಫಲಿತಾಂಶ ಲಭಿಸಿದೆ.
ಒಟ್ಟು 274 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 261 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 40 ವಿದ್ಯಾರ್ಥಿಗಳು ಉತ್ತಮ ಶ್ರೇಣಿ, 178 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 35 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 8 ವಿದ್ಯಾರ್ಥಿಗಳು ತೃತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಜೀವನ್ ಕೆ. ೫೫೭(೯೨.೮೩%), ವಾಣಿಜ್ಯ ವಿಭಾಗದಲ್ಲಿ ಜೋಶನ್ ರಾಫಲ್ ಡಿಸೋಜ ೫೯೩(೯೮.೮೩%), ಕಲಾ ವಿಭಾಗದಲ್ಲಿ ಯಕ್ಷಿತಾ ೫೩೩(೮೮.೮೩%) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.