ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ಏ. 20ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ
ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಮಚ್ಚಿನದಲ್ಲಿ ನಡೆಯಿತು.
ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಕೋರಬೆಟ್ಟು, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ, ಗ್ರಾಮ ಸಮಿತಿ ಮಾಜಿ ಅಧ್ಯಕ್ಷ ಸತೀಶ್ ಕರಂದೂರು, ಪಕ್ಷದ ಪ್ರಮುಖರಾದ ನಾರಾಯಣ ಪೂಜಾರಿ ಮಧುರ ನಿವಾಸ, ಪಕ್ಷದ ಪ್ರಮುಖರಾದ ವಿನಯಚಂದ್ರ ಗೌಡ ಹಟತ್ತೋಡಿ ಕೇಶವ ಪಾಲಡ್ಕ, ಹಾಗೂ ಪಕ್ಷದ ಗ್ರಾಮ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.