32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಧರ್ಮಸ್ಥಳ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ ” ಎಂಬ ಯೂಟ್ಯೂಬರ್ ಹರಿಬಿಟ್ಟಿದ್ದು, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಘನ ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟಿದ್ದ ಸಮೀರ್ ಎಂ.ಡಿ. ದೂತ ಎಂಬ ವ್ಯಕ್ತಿ ಹಾಗೂ ಯೂಟ್ಯೂಬ್ ಚಾನಲ್ ದೂತದ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಹತ್ತು ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಹೂಡಿದ್ದಾರೆ.

ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಹಾಗೂ ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಮಹತ್ವದ ಆದೇಶ ಮಾಡಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!