ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವವು ತಹಸೀಲ್ದಾರ್ ಪ್ರಥ್ವಿ ಸಾನಿಕಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಬೆಳ್ತಂಗಡಿ ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್ ಭಾಗವಹಿಸಿದ್ದರು.

ಸಮಾರಂಭದಲ್ಲಿ ದೀಮತಿ ಮಹಿಳಾ ಸಮಾಜ ಉಜಿರೆ ಅಧ್ಯಕ್ಷೆ ಡಾ. ಪಿ ರಜತ ಶೆಟ್ಟಿ ಯವರು ಧಾರ್ಮಿಕ ಉಪನ್ಯಾಸ ನೀಡಿದರು ಬೆಳ್ತಂಗಡಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್ ವಿಜಯಕುಮಾರ್, ತಾಲೂಕಿನ ಇಲಾಖೆಯ ಇಲಾಖಾಧಿಕಾರಿಗಳು, ಸಮಾಜ ಬಾಂಧವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಜಯಾನಂದ ತಾಲೂಕು ಪಂಚಾಯತ್ ಬೆಳ್ತಂಗಡಿ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಪರಮೇಶ್ ತಾಲೂಕು ಕಛೇರಿ ಇವರು ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ನಿರ್ಹಹಣೆ ಮಾಡಿದರು.

Related posts

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya
error: Content is protected !!