April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ: ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.


ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ ಕಾರು ಕಳ್ಳತನವಾಗಿದೆ.
ಇವರು ಕಾರನ್ನು ಉಜಿರೆ ಕಾಲೇಜು ರಸ್ತೆಯಲ್ಲಿರುವ ತಮ್ಮ ಅಂಗಡಿಯ ಸಮೀಪದ ಪಾರ್ಕಿಂಗ್ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ರಾತ್ರಿ ಅಂಗಡಿ ಮುಚ್ಚಿ ಬಂದು ನೋಡಿದಾಗ ನಿಲ್ಲಿಸಿದ್ದ ಕಾರು ನಾಪತ್ತೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 6,50,000 ಎಂದು ಅಂದಾಜಿಸಲಾಗಿದೆ. ಎ.29ರಂದು ಘಟನೆ ನಡೆದಿದ್ದು ಕಾರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಘಟನೆಯ ಬಗ್ಗೆ ಅಬ್ದುಲ್ ಮುತ್ತಲೀಫ್  ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ‌ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya
error: Content is protected !!