September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಇದರ ನೇತ್ರಾವತಿ ಸಭಾಂಗಣದಲ್ಲಿ ಮಾನ್ವಿ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಧರ್ಮಸ್ಥಳ ಮತ್ತು ಜಿಲ್ಲಾ ಕೃಷಿ ತರಬೇತಿ ಬೆಳ್ತಂಗಡಿ ಇದರ ಸಹಯೋಗದಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾದ ಪ್ರಭಾಕರ್ ಮಯ್ಯ ಇವರು ಸಾವಯವ ಕೃಷಿಯ ಬಗ್ಗೆ , ಕೃಷಿಗೆ ರೋಗಗಳ ನಿಯಂತ್ರಣದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗಣೇಶ್ ಉಪಸ್ಥಿತರಿದ್ದು ಕೃಷಿ ಇಲಾಖೆಯ ಸೌಲಭ್ಯದ ಬಗ್ಗೆ ತಿಳಿಸಿದರು.


ಉಜಿರೆ ಕೃಷಿ ಸಖಿ ಭಾಗೀರಥಿಯವರು ಅಣಬೆ ಕೃಷಿ ಬಗ್ಗೆ ತರಬೇತಿ ನೀಡಿದರು. ಕೃಷಿ ಸಖಿ ಸುಚೇತಾ ಸ್ವಾಗತಿಸಿ ಅಚ್ಚು ಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಿದರು.
ಒಕ್ಕೂಟದ ಕಾರ್ಯದರ್ಶಿ ವಿಜಯಲಕ್ಷ್ಮಿ, ಪದಾಧಿಕಾರಿಯವರು, ಪಂಚಾಯತ್ ಸಿಬ್ಬಂದಿಗಳಾದ ವಂದನಾ, ಶಿವಾನಂದ ಗ್ರಂಥ ಪಾಲಕಿ ಮಂಜುಳಾ, ಎಮ್.ಬಿ.ಕೆ ಚಂದ್ರಾವತಿ, ಎಲ್ ಸಿ ಆರ ಪಿ ವೀಣಾ, ಪಶುಸಖಿ ಯಶೋದ ಉಪಸ್ಥಿತರಿದ್ದು ಸಹಕರಿಸಿದರು. ಗ್ರಾಮದ ಕೃಷಿಕರು ಮತ್ತು ಮಹಿಳೆಯರು ತರಬೇತಿಯ ಪ್ರಯೋಜನ ಪಡೆದುಕೊಂಡರು.

Related posts

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya
error: Content is protected !!