
ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಹಾಗೂ ಪ್ರಾದೇಶಿಕ ರಕ್ತನಿಧಿ ಕೇಂದ್ರ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ದೀಪಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್,
ಬಂಗಾಡಿ ಸಿ. ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೊರ್ತಾಜೆ, ನಡ ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ , ನಂದ ಕುಮಾರ್ ಪುಂಜಾಲಕಟ್ಟೆ, ಡಾ.ಅಶೋಕ. ಡಾ. ಜಯಶ್ರೀ, ಕಳಿಯ ಸಿಎ ಬ್ಯಾಂಕ್ ಸದಸ್ಯ ಬಾಲಕೃಷ್ಣ ಗೌಡ ಬಿರ್ಮೊಟ್ಟು ಉಪಸ್ಥಿತರಿದ್ದರು.