27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

ಬೆಳ್ತಂಗಡಿ : ಉಜಿರೆ ಓಡಲದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ.

ಸ್ಥಳೀಯ ನಿವಾಸಿ ರತ್ನ (55) ಎಂಬವರು ಏ.10 ರಂದು 6.30 ಗಂಟೆಯ ಸುಮಾರಿಗೆ ಉಜಿರೆ ಓಡಲ ವ್ಯಾಘ್ರ ಚಾಮುಂಡಿ ದ್ವಾರದ ಬಳಿ ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯ ಸಮೀಪ ಬಂದು ಬೈಕ್ ಅನ್ನು ಚಾಲೂ ಸ್ಥಿತಿಯಲ್ಲಿ ನಿಲ್ಲಿಸಿ ಒಬ್ಬ ಬೈಕ್ ನಿಂದ‌ ಇಳಿದು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾರೆ. ಕುತ್ತಿಗೆಯಿಂದ‌ ಸರವನ್ನು ಎಳೆದು ತುಂಡರಿಸುವ ವೇಳೆ ಮಹಿಳೆಯ ಕುತ್ತಿಗೆಗೆ ಗಾಯಗಳಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳತನವಾದ ಚಿನ್ನದ ಸರ 33 ಗ್ರಾಂ ತೂಕದ್ದಾಗಿದ್ದು ಇದರ ಮೌಲ್ಯ ಸುಮಾರು ಒಂದೂವರೆ ಲಕ್ಷ ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿರುವುದು ಸ್ಥಳೀಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

Related posts

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!