ಗುರುವಾಯನಕೆರೆ : ಕಡುಬಡತನದ ಕುಟುಂಬದ ವಿದ್ಯಾರ್ಥಿಯೊಬ್ಬಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.98 ಅಂಕಗಳಿಸುವುದರೊಂದಿಗೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.
ಈ ಸಾಧನೆ ಮಾಡಿರುವ ಪಲ್ಲವಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ. ತಾಯಿ ಕ್ಯಾನ್ಸರ್ ಕಾಯಿಲೆಗೆ ಒಳಗಾಗಿದ್ದು ತಂದೆ ದಿನೇಶ್ ನಾಯ್ಕ್ ಹೋಟೆಲ್ ನಲ್ಲಿ ಕೆಲಸ ಮಾಡಿ ಕುಟುಂಬವನ್ನು ಸಾಕುತ್ತಿದ್ದಾರೆ. ವಿದ್ಯಾರ್ಥಿಯು ಭವಿಷ್ಯದಲ್ಲಿ ಉನ್ನತ ಶಿಕ್ಷಣ ಪಡೆದು ಉದ್ಯೋಗ ಪಡೆಯಲಿ ಎಂಬುದು ಸಾರ್ವಜನಿಕರ ಅಭಿಪ್ರಾಯ. ಆದರೆ ಮಗಳ ಮುಂದಿನ ವಿದ್ಯಾಭ್ಯಾಸಕ್ಕೆ ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದೆ ಕುಟುಂಬ. 7760777360