ಬೆಳ್ತಂಗಡಿ: ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ಎ.20 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ರೋಯಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಡಿಜಿಟಲ್ ಯೂತ್ ಫಾರ್ ಬೂತ್ ಅಜೆಂಡಾದ ಬಗ್ಗೆ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅಜಾರುದ್ದೀನ್ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷ ಅರುಣ್ ಲೋಬೋ ಸಂಘಟನೆಯ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು. ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ನವೀನ್ ಗೌಡ ಸ್ವಾಗತಿಸಿದರು .

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಮೈರಾಬಾನು ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷರಾದ ಅನ್ಸಾಪ್ ಹಾಗೂ ವಿಧಾನಸಭಾ ಕ್ಷೇತ್ರ ಹಾಗೂ ನಗರ ಮತ್ತು ಗ್ರಾಮೀಣ ಸಮಿತಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು