ಕಡಿರುದ್ಯಾವರ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್ (89ವ) ಅವರು ವಯೋಸಹಜ ಅಸೌಖ್ಯದಿಂದ ಬಳಲಿ ಇಂದು (ಎ.14 ರಂದು) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.
ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿಯಾಗಿರುವ ಮಂಜುನಾಥ ಕಾಮತ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದಾರೆ. ಮಾಜಿ ಸಚಿವ ಗಂಗಾಧರ ಗೌಡ ಸಚಿವರಾಗಿದ್ದ ಅವಧಿಯಲ್ಲಿ ಅವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ, 20 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರಾಗಿ ದೇವಸ್ಥಾನದ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದರು. ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಇವರು ಬಂಗಾಡಿ ಸಿ.ಎ ಬ್ಯಾಂಕ್‌ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ವರ್ತಕರಾಗಿ, ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆಯನ್ನು ಗಳಿಸಿದ್ದರು.
ಮೃತರು ಪುತ್ರ ಸತೀಶ್ ಕಾಮತ್ ಹಾಗೂ ನಾಲ್ವರು ಹೆಣ್ಣು ಮಕ್ಕಳು, ಬಂಧು-ವರ್ಗದವರು, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.