September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಅವರು ವಿಶ್ವಕಂಡ ಧೀಮಂತ ವ್ಯಕ್ತಿಗಳಲ್ಲಿ ಅಗ್ರಗಣ್ಯರಾಗಿದ್ದಾರೆ, ಇವರ ವಿಚಾರಧಾರೆಗಳಿಗೆ, ಜ್ಞಾನ ಭಂಡಾರಕ್ಕೆ ವಿಶ್ವದಾದ್ಯಂತ ಅನುಯಾಯಿಗಳನ್ನು ಹೊಂದಿದ್ದಾರೆ.

ಸಮಾಜದ ಕಟ್ಟೆ ಕಡೆಯ ವ್ಯಕ್ತಿಯ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆಯನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿಯೊಬ್ಬರಿಗೂ ಸ್ವತಂತ್ರವಾದ ಜೀವನ ರೂಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ. ಉಜಿರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ನಮಿತಾ ಪೂಜಾರಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶ್ರೀಧರ್ ಕಳೆಂಜ, ಇಂಟೆಕ್ ಗ್ರಾಮೀಣ ಅಧ್ಯಕ್ಷ ಅಶ್ರಫ್ ನೆರಿಯ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಕಾರ್ಯದರ್ಶಿ ರಜತ್ ಗೌಡ, ಬೊಮ್ಮಣ್ಣ ಗೌಡ, ಪುದುವೆಟ್ಟು ಭೂ ನ್ಯಾಯ ಮಂಡಳಿ ಸಮಿತಿಯ ಸದಸ್ಯರು, ಅಬ್ದುಲ್ ಗಫ್ಫುರ್ ಪುದುವೆಟ್ಟು , ಮಾಜಿ ಎಪಿಎಂಸಿ ಉಪಾಧ್ಯಕ್ಷರು, ಸಂತೋಷ್ ಕೆ ಸಿ ಪುದುವೆಟ್ಟು, ರೊಯ್ ಪುದುವೆಟ್ಟು ಪಂಚಾಯತ್ ರಾಜ್ ಗ್ರಾಮೀಣ ಅಧ್ಯಕ್ಷರು, ಡಯಾನಾ ಪುದುವೆಟ್ಟು ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya
error: Content is protected !!