
ಬೆಳ್ತಂಗಡಿ: ತಾಲೂಕು ಆಡಳಿತ, ಬೆಳ್ತಂಗಡಿ ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ ಎ.14 ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಹ ಶಿಕ್ಷಕ ಅರವಿಂದ ಚೊಕ್ಕಾಡಿ ಮುಖ್ಯ ಭಾಷಣ ಮಾಡಿದರು. ತಹಶೀಲ್ದಾರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಪೃಥ್ವಿ ಸಾನಿಕಂ, ತಾ.ಪಂ.ಇಓ ಭವಾನಿ ಶಂಕರ್ ಎನ್., ಪ.ಪಂ.ಮುಖ್ಯಾಧಿಕಾರಿ ರಾಜೇಶ್ ಕೆ., ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಮಾಲಾಡಿ ಹಾಗೂ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ ಎನ್.ಎಸ್. ಉಪಸ್ಥಿತರಿದ್ದರು.
ದಲಿತ ಸಂಘದ ಮುಖಂಡರು, ಪ್ರತಿನಿಧಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿಗಳು, ಪ್ರಾಂಶುಪಾಲರು ಹಾಜರಿದ್ದರು.
ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮುರಳೀಧರ್ ಸ್ವಾಗತಿಸಿ, ವಸತಿ ನಿಲಯದ ಮೇಲ್ವಿಚಾರಕಿ ಹೇಮಾಲತಾ ನಿರೂಪಿಸಿದರು.