
ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ.೨೦ರಂದು ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಉಪಸ್ಥಿಯಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಬಗ್ಗೆ ಬೆಳ್ತಂಗಡಿ ನಗರ ವ್ಯಾಪ್ತಿಯ ಪೂರ್ವಭಾವಿ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಾರ್ಯಕ್ರಮ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಪದ್ಮನಾಭ ಸಾಲಿಯಾನ್, ಅಳದಂಗಡಿ ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ, ಜಿಲ್ಲಾ ಕೆಡಿಪಿ ಸದಸ್ಯ ಹಾಗೂ ನ್ಯಾಯವಾದಿ ಸಂತೋಷ ಕುಮಾರ್, ಪ.ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಕೆ ವಸಂತ್, ಪ.ಪಂ. ಸದಸ್ಯರಾದ ಜಗದೀಶ್ ಹಾಗೂ ಜನಾರ್ಧನ ಕುಲಾಲ್, ಮಾಜಿ ಸದಸ್ಯ ಮೆಹಬೂಬ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.