ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ. 20ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರ ಉಪಸ್ಥಿಯಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಪೆರಾಡಿ ಗ್ರಾಮದ ಪೂರ್ವಬಾವಿ ಸಭೆಯು ಪೆರಾಡಿ ಧನುಷ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಬಗ್ಗೆ ವಿವರಿಸಿದ್ದರು. ಈ ವೇಳೆ ಕೃಷಿಕ ಸಮಾಜದ ಅಧ್ಯಕ್ಷರು ಆಗಿ ಆಯ್ಕೆಯಾದ ಪಿ ಕೆ ರಾಜು ಪೂಜಾರಿ ಅವರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಾಹುಲ್ ಹಮೀದ್, ಪೆರಾಡಿ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀಪತಿ ಭಟ್, ಪೆರಾಡಿ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಪ್ರವೀಣ್ ಪಿಂಟೊ, ಭೂ ನ್ಯಾಯಾಲಯ ಮಂಡಲ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ, ಅಳದಂಗಡಿ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೇಡಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಂದನಾ ಭಂಡಾರಿ, ಕಾಶಿಪಟ್ಣ ಪಂಚಾಯತ್ ಉಪಾಧ್ಯಕ್ಷೆ ಶುಭವಿ, ನಗರ ಎಸ್ ಸಿ ಘಟಕದ ಅಧ್ಯಕ್ಷರಾದ ವಿಜಯ ವೇಣೂರು, ಉದ್ಯಮಿಗಳಾದ ಪ್ರವೀಣ್ ಹಳ್ಳಿಮನೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೊ, ಹಿರಿಯರಾದ ಪಿ.ಕೆ ರಾಜು ಪೂಜಾರಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.