ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 1ನೇ ತರಗತಿಗೆ ಮಕ್ಕಳನ್ನು ಸೇರ್ಪಡೆ ಮಾಡಲು ಇರುವ ವಯೋಮಿತಿಯನ್ನು ತುಸು ಸಡಿಲಗೊಳಿಸಿದೆ. ಇಷ್ಟು ದಿನ ಒಂದನೇ ತರಗತಿಗೆ ಸೇರಿಸಲು ವಯೋಮಿತಿ 6 ವರ್ಷ ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿತ್ತು. ಆದರೆ ಇದೀಗ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ.ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.