25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

ಬೆಳ್ತಂಗಡಿ: ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಎ.16 ರಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ ಮಕ್ಕಳು ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು.


ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮಖ್ಯೋಪಾಧ್ಯಾಯಿನಿ ಶ್ರೀಮತಿ ಜ್ಯೋತಿ ಎ.ಎನ್, ಹಳೆ ವಿದ್ಯಾರ್ಥಿ ಸಂಘದ ಶಿವರಾಜ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ಚಿಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರನ್ನು ಭೇಟಿ ಮಾಡಿ ಅವರಿಗೂ ವಿದ್ಯಾರ್ಥಿಗಳು ತರಕಾರಿ ನೀಡಿದರು.

Related posts

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya
error: Content is protected !!