April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

ಗುರುವಾಯನಕೆರೆ: ಇಲ್ಲಿಯ ವಿದ್ವತ್ ಪಿಯು ಕಾಲೇಜಿನಲ್ಲಿ ಎ.17ರಂದು ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ಹತ್ತನೇ ತರಗತಿ ಪರೀಕ್ಷೆ ಬರೆದು ಮುಂದಿನ ಪಿಯು ಶಿಕ್ಷಣಕ್ಕಾಗಿ ಮಹದಾಸೆಯನ್ನಿಟ್ಟುಕೊಂಡಿರುವ ನೀಟ್/ ಜೆಇಇ / ಸಿಇಟಿ ಮುಂತಾದ ಆಕಾಂಕ್ಷಿಗಳು ಈ ವಿದ್ವತ್ ಪ್ರೇರಣಾ ಕೋಚಿಂಗ್ ಗೆ ನೊಂದಾಯಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಅಂಗವಾಗಿ, ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ ಈ ಮಂಡಗಳಲೆ ಅವರು ವಿದ್ಯಾರ್ಥಿಗಳು ಪಿಯು ಕಾಲೇಜು ಅಭ್ಯಾಸದ ಸಮಯದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಎಚ್ಚರಿಕೆಯಿಂದ ತಯಾರಿ ಆರಂಭಿಸಬೇಕು ಎಂಬುದರ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಜ್ವಲ ಮಾರ್ಗದರ್ಶನ ನೀಡಿದರು.

ಪಿಯು ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ 27 ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡುವ ಮೂಲಕ, ಅವರು ಸ್ಪರ್ಧಾತ್ಮಕ ಜಗತ್ತಿನ ಬಾಗಿಲು ತೆರೆದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ. ಪ್ರದೀಪ್ ನಾವೂರ್ ಅವರು ವಿದ್ಯಾರ್ಥಿಗಳಿಗೆ ಉತ್ಸಾಹದ ಸಂದೇಶವನ್ನು ನೀಡುತ್ತಾ, ಸಾಧನೆಯ ಹಾದಿಯಲ್ಲಿ ಬರುವ ಸವಾಲುಗಳನ್ನು ಸ್ವೀಕರಿಸುವ ಬಗೆ ಹಾಗೂ ಆತ್ಮಶಕ್ತಿಯನ್ನು ವೃದ್ಧಿಸಿಕೊಳ್ಳುವ ಬಗೆಗಳನ್ನು ಮನಮುಟ್ಟುವಂತೆ ತಿಳಿಸಿ, ಆಕಾಂಕ್ಷಿಗಳ ಭವಿಷ್ಯಕ್ಕೆ ಶುಭಕೋರಿದರು.

ಅಧ್ಯಕ್ಷೀಯ ನುಡಿಗಳನ್ನು ಹಂಚಿಕೊಂಡ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿಯವರು, ವಿದ್ವತ್ ಪ್ರೇರಣಾ ಕ್ಲಾಸ್ ಕನೆಕ್ಟ್ ನ ಮಹತ್ವವನ್ನು ವಿವರಿಸುತ್ತಾ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮುನ್ನಡೆಗೆ ಹೇಗೆ ಸಹಾಯಕ ಎಂಬುದನ್ನು ತಿಳಿಸಿದರು.ಸಮಾರಂಭದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಜ್ವಲ್ ರೈ, ಹಿರಿಯ ಸಲಹೆಗಾರರಾದ ಶ ರಾಧಾಕೃಷ್ಣ ರೈ ಹಾಗೂ ವಿದ್ವತ್ ಪಿಯು ಕಾಲೇಜಿನ ಉಪನ್ಯಾಸಕರ ತಂಡ ಹಾಗೂ ರಾಜ್ಯದ ಎಲ್ಲೆಡೆಯಿಂದ ಬಂದಂತಹ ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya
error: Content is protected !!