September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

ಗುರುವಾಯನಕೆರೆ: ಇಲ್ಲಿಯ ವಿದ್ವತ್ ಪಿಯು ಕಾಲೇಜಿನಲ್ಲಿ ಎ.17ರಂದು ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ಹತ್ತನೇ ತರಗತಿ ಪರೀಕ್ಷೆ ಬರೆದು ಮುಂದಿನ ಪಿಯು ಶಿಕ್ಷಣಕ್ಕಾಗಿ ಮಹದಾಸೆಯನ್ನಿಟ್ಟುಕೊಂಡಿರುವ ನೀಟ್/ ಜೆಇಇ / ಸಿಇಟಿ ಮುಂತಾದ ಆಕಾಂಕ್ಷಿಗಳು ಈ ವಿದ್ವತ್ ಪ್ರೇರಣಾ ಕೋಚಿಂಗ್ ಗೆ ನೊಂದಾಯಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಅಂಗವಾಗಿ, ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ ಈ ಮಂಡಗಳಲೆ ಅವರು ವಿದ್ಯಾರ್ಥಿಗಳು ಪಿಯು ಕಾಲೇಜು ಅಭ್ಯಾಸದ ಸಮಯದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಎಚ್ಚರಿಕೆಯಿಂದ ತಯಾರಿ ಆರಂಭಿಸಬೇಕು ಎಂಬುದರ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಜ್ವಲ ಮಾರ್ಗದರ್ಶನ ನೀಡಿದರು.

ಪಿಯು ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ 27 ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡುವ ಮೂಲಕ, ಅವರು ಸ್ಪರ್ಧಾತ್ಮಕ ಜಗತ್ತಿನ ಬಾಗಿಲು ತೆರೆದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ. ಪ್ರದೀಪ್ ನಾವೂರ್ ಅವರು ವಿದ್ಯಾರ್ಥಿಗಳಿಗೆ ಉತ್ಸಾಹದ ಸಂದೇಶವನ್ನು ನೀಡುತ್ತಾ, ಸಾಧನೆಯ ಹಾದಿಯಲ್ಲಿ ಬರುವ ಸವಾಲುಗಳನ್ನು ಸ್ವೀಕರಿಸುವ ಬಗೆ ಹಾಗೂ ಆತ್ಮಶಕ್ತಿಯನ್ನು ವೃದ್ಧಿಸಿಕೊಳ್ಳುವ ಬಗೆಗಳನ್ನು ಮನಮುಟ್ಟುವಂತೆ ತಿಳಿಸಿ, ಆಕಾಂಕ್ಷಿಗಳ ಭವಿಷ್ಯಕ್ಕೆ ಶುಭಕೋರಿದರು.

ಅಧ್ಯಕ್ಷೀಯ ನುಡಿಗಳನ್ನು ಹಂಚಿಕೊಂಡ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿಯವರು, ವಿದ್ವತ್ ಪ್ರೇರಣಾ ಕ್ಲಾಸ್ ಕನೆಕ್ಟ್ ನ ಮಹತ್ವವನ್ನು ವಿವರಿಸುತ್ತಾ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮುನ್ನಡೆಗೆ ಹೇಗೆ ಸಹಾಯಕ ಎಂಬುದನ್ನು ತಿಳಿಸಿದರು.ಸಮಾರಂಭದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಜ್ವಲ್ ರೈ, ಹಿರಿಯ ಸಲಹೆಗಾರರಾದ ಶ ರಾಧಾಕೃಷ್ಣ ರೈ ಹಾಗೂ ವಿದ್ವತ್ ಪಿಯು ಕಾಲೇಜಿನ ಉಪನ್ಯಾಸಕರ ತಂಡ ಹಾಗೂ ರಾಜ್ಯದ ಎಲ್ಲೆಡೆಯಿಂದ ಬಂದಂತಹ ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ಮುಳಿಯ “ಸಿಲ್ವರ್ ಮ್ಯಾರಥಾನ್ 2026” ಚಾಲನೆ

Suddi Udaya
error: Content is protected !!