ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದಿಂದ ಎ.19 ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ರಾಮೋತ್ಸವ ಜರುಗಲಿದೆ.
ಸಂಜೆ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಕಾರ್ಯಕ್ರಮ ಉದ್ಘಾಟಿಸಲಿರುವರು.
ಬೆಳ್ತಂಗಡಿ ಪ್ರಖಂಡ ಅಧ್ಯಕ್ಷ ವಿಷ್ಣು ಮರಾಠೆ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ ಧಾರ್ಮಿಕ ಉಪನ್ಯಾಸ ನೀಡಲಿರುವರು. ಬೆಳ್ತಂಗಡಿ ವಕೀಲ ಸುಬ್ರಹ್ಮಣ್ಯ ಅಗರ್ತ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಗೌರವ ಉಪಸ್ಥಿತರಿರುವರು.
ಬೆಳಿಗ್ಗೆ ಪ್ರತಿಷ್ಠಾಪನೆ, ವಿವಿಧ ಭಜನಾ ತಂಡಗಳಿAದ ಭಜನೆ, ಸಾರ್ವಜನಿಕ ಅನ್ನಸಂತರ್ಪಣೆ, ನೃತ್ಯ ಸ್ಪರ್ಧೆ, ಹನುಮಯಾಗ, ರಾವಣ ದಹನ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.