24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

ಉಜಿರೆ: ದೇಹಕ್ಕೆ ಮತ್ತು ಮನಸ್ಸಿಗೆ ಆರೋಗ್ಯ ಕೊಡುವ ಸಾಧನವೇ ಯೋಗ. ಮಾನಸಿಕ ಹಾಗೂ ದೈಹಿಕ ಸ್ವಸ್ಥತೆ ಶಿಕ್ಷಕರಿಗೆ ಮುಖ್ಯ. ಪಠ್ಯಕ್ರಮದ ಭಾಗವಾಗಿ ಯೋಗವನ್ನು ಕಲಿಯುವುದು ಮಾತ್ರವಲ್ಲದೇ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದು ಅತೀ ಮುಖ್ಯ ಎಂದು ಉಜಿರೆಯ ಪ್ರಕೃತಿ ಮತ್ತು ಯೋಗ ವಿಜ್ಞಾನ ವಿದ್ಯಾಲಯದ ಡೀನ್ ಡಾ. ಶಿವಪ್ರಸಾದ್ ಇವರು ಎಸ್.ಡಿ.ಎಮ್. ಬಿ.ಎಡ್ ಕಾಲೇಜಿನಲ್ಲಿ ನಡೆದ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು.


ಶಿಕ್ಷಕರಿಗೆ ನಾಟಕ ಮತ್ತು ರಂಗಭೂಮಿಯ ಪರಿಚಯದೊಂದಿಗೆ ಅದನ್ನು ಬಳಸುವ ಕೌಶಲವಿರುವ ವಾತಾವರಣ ಸಿಕ್ಕಿರುವುದು ನಿಮ್ಮ ಅದೃಷ್ಟ. ಹಾಗಾಗಿ ಅದನ್ನು ಪರಿಣಾಮಕಾರಿಯಾಗಿ ಸದುಪಯೋಗಪಡಿಸಿಕೊಳ್ಳಿ ಎಂದು ಎಸ್. ಡಿ. ಎಮ್. ಕಾಲೇಜಿನ ರಂಗ ತರಬೇತಿಯ ನಿರ್ದೇಶಕ ಯಶವಂತ ಬೆಳ್ತಂಗಡಿ ಅತಿಥಿಯಾಗಿ ಆಗಮಿಸಿ ಮಾತನಾಡಿದರು.


ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂತೋಷ್ ಆಲ್ಬರ್ಟ್ ಸಲ್ಡಾನ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ “ಸ್ವಸ್ಥ ದೇಹ, ಸ್ವಸ್ಥ ಮನಸ್ಸನ್ನು ನೀಡುವುದು ಯೋಗ. ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜನ್ನು ಯೋಗದ ವಿಶ್ವಗುರು ಎಂದು ಹೇಳಲಾಗುತ್ತಿದೆ ” ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ, ಎಲ್ಲಾ ಉಪನ್ಯಾಸಕ ವರ್ಗದವರು, ಪ್ರಥಮ ಮತ್ತು ದ್ವಿತೀಯ ಬಿ.ಇಡಿ. ಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ ಸ್ವಾಗತಿಸಿ, ಚೈತ್ಯನ್ಯ ಹಾಗೂ ಪ್ರತಿಮಾ ಅತಿಥಿಗಳನ್ನು ಪರಿಚಯಿಸಿ, ಮಲ್ಲಿಕಾರ್ಜುನ ಪಾಟೀಲ್ ವಂದಿಸಿ, ಅಕ್ಷಿತಾ ಎಂ ಕಾರ್ಯಕ್ರಮ ನಿರೂಪಿಸಿದರು.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!