37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

ಬೆಳ್ತಂಗಡಿ : ಒಳ್ಳೆಯ ಚಟುವಟಿಕೆಗಳಿಂದ ಶಿಬಿರಾರ್ಥಿಗಳು ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ಮಾದರಿಯಾಗಬೇಕು. ವಿನೂತನ ರೀತಿಯ ಝೇಂಕಾರ ಬೇಸಿಗೆ ಶಿಬಿರದ ಚಟುವಟಿಕೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ವಕೀಲ,ಬಿಎಂಎಸ್ ಜಿಲ್ಲಾಧ್ಯಕ್ಷ ಯು ಅನಿಲ್ ಕುಮಾರ್ ಹೇಳಿದರು

ಅವರು ಬೆಳ್ತಂಗಡಿ ನಗರ ಪಂಚಾಯತ್ ಬಳಿಯ ಮಹಿಳಾ ವೃಂದದ ಸಭಾಂಗಣದಲ್ಲಿ ಎಂಟು ದಿನಗಳ ಕಾಲ ನಡೆಯುವ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೈ ಕನ್ನಡಮ್ಮ ವಾರಪತ್ರಿಕೆಯ ಸ್ಥಾನೀಯ ಸಂಪಾದಕರಾದ ಮಂಜುಳಾ ಡಿ ಪ್ರಸಾದ್ ರವರು ವಹಿಸಿ ಮಾತನಾಡಿ ತಾಲೂಕಿನ ವಿವಿಧ ಮೂಲೆಗಳಿಂದ ಆಗಮಿಸಿದ ಮಕ್ಕಳು ಒಂದೇ ಸೂರಿನಡಿ ಸೇರಿ ಆನಂದಿಸುವ ಈ ಬೇಸಿಗೆ ಶಿಬಿರವು ಮಕ್ಕಳ ಕ್ರಿಯಾಶೀಲ ಚಿಂತನೆಗೆ ಅಡಿಪಾಯವಾಗುವುದರೊಂದಿಗೆ ರಜಾ ಸಮಯವನ್ನು ಉತ್ತಮ ರೀತಿಯಲ್ಲಿ ಕಳೆಯಲು ಉತ್ತಮ ಅವಕಾಶ ಎಂದು ಹೇಳಿದರು.

ಬೆಳ್ತಂಗಡಿ ರೇಷ್ಮೆ ಇಲಾಖೆಯ ನಿವೃತ್ತ ಅಧಿಕಾರಿ ಸುಭಾಷ್ ಚಂದ್ರರವರು ಝೇಂಕಾರ ಬೇಸಿಗೆ ಶಿಬಿರದ ಅಚ್ಚುಕಟ್ಟುತನವನ್ನು ಶ್ಲಾಘಿಸಿ ಶುಭ ಕೋರಿದರು.

ಶಿಬಿರದ ಸಂಯೋಜಕಿ ಹೇಮಾವತಿ ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕುಮಾರಿ ನವ್ಯಾ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ‌ಶಿಕ್ಷಕಿ ಹರಿಣಾಕ್ಷಿ ಕೆ ನಿರೂಪಿಸಿ ಧನ್ಯವಾದವಿತ್ತರು.ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಂಪನ್ಮೂಲ ವ್ಯಕ್ತಿ ರಾಷ್ಟ್ರಮಟ್ಟದ ಕಲಾವಿದರಾದ ಸದಾಶಿವ ಶಿವಗಿರಿ ಕಲ್ಲಡ್ಕ ಶಿಬಿರದ ಚಟುವಟಿಕೆಗಳನ್ನು ನಡೆಸಿಕೊಟ್ಟರು.

Related posts

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
error: Content is protected !!