
ಉಜಿರೆ: ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ) ಉಜಿರೆಯ ಸಾಮಾಜಿಕ ಕಾರ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಆರೋಗ್ಯಕರ ನಾಳೆಯಲ್ಲಿ ಹೂಡಿಕೆ: ಆರೋಗ್ಯಕರ ಆರಂಭ, ಆಶಾದಾಯಕ ಭವಿಷ್ಯ ಎಂಬ ವಿಷಯದ ಕುರಿತು ನಡೆದ ಎರಡು ದಿನಗಳ “ರಾಷ್ಟ್ರೀಯ ವಿಚಾರಸಂಕಿರಣ ಮತ್ತು ಉತ್ಸವ – ಸಂಭ್ರಮ 2025 ” ಕಾರ್ಯಕ್ರಮದಲ್ಲಿ ಉಜಿರೆ ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿ ಸಮೂಹ ನೃತ್ಯ ಪ್ರಥಮ ಸ್ಥಾನ, ಮೈಮ್ ಶೋ ಪ್ರಥಮ ಸ್ಥಾನ, ಮ್ಯಾಡ್ ಆ್ಯಡ್ ಪ್ರಥಮ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಇವರಿಗೆ ಸಂಸ್ಥೆಯ ಪರವಾಗಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.