
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಟ್ರಸ್ಟ್ ಮತ್ತು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಕೇಂದ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಸಹಕಾರದೊಂದಿಗೆ ನಡೆಯುವ ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ವೆಚ್ಚುಗೆ ವ್ಯಕ್ತಪಡಿಸಿದರು ಇದೇ ಸಮಯದಲ್ಲಿ ಮುಂದಿನ ವರ್ಷದ ಚಟುವಟಿಕೆಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ್ ಬಿ.ಪಿ ಹಾಗೂ ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಮತ್ತು ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ಕೆ.ಕರುಣಾಕರ ಜೈನ್, ಸಹೋದ್ಯೋಗಿಗಳಾದ ಪ್ರವೀಣ್, ಕಾಶ್ಮೀರ ಡಿ’ಸೋಜಾ, ಸುರೇಶ್ ಗೌಡ ಜೊತೆಗೆ ಇದ್ದರು.
ಈ ವರ್ಷ 33 ಸ್ವ ಉದ್ಯೋಗ ತರಬೇತಿಗಳನ್ನು ನಡೆಸಿ, 1012ಜನ ನಿರೋದ್ಯಗಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗಿದೆ. ಈ ವರ್ಷ 730 ಜನ ಸ್ವ ಉದ್ಯೋಗ ಆರಂಭಿಸಿ ಸ್ವಂತ ಬದುಕು ನಡೆಸು ಮೂಲಕ ಯಶಸ್ಸಿನ ಪ್ರಮಾಣ ಶೇಕಾಡ 72% ರಷ್ಟಿದ್ದು. ಇದು ಮತ್ತೊಂದು ಮೈಲಿಗಲ್ಲನ್ನು ತಲುಪಿದೆ.