ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏಪ್ರಿಲ್ 20ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಉಪಸ್ಥಿಯಲ್ಲಿ ನಡೆಯುವ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಪೂರ್ವಭಾವಿ ಸಭೆಯು ಕುಕ್ಕೇಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷ ಸತೀಶ್ ಕೆ, ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ನಾರಾವಿ ಜಿಲ್ಲಾ ಪಂಚಾಯತ್ ವೀಕ್ಷಕರಾದ ಪ್ರವೀಣ್ ಪಿಂಟೋ,ತಾಲೂಕು ನಗರ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷ ದಯಾನಂದ ದೇವಾಡಿಗ, ಕುಕ್ಕೇಡಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಗುಣವತಿ ಡಿ, ಶ್ರೀಮತಿ ತೇಜಾಕ್ಷಿ, ಶ್ರೀಮತಿ ರಜನಿ, ಕುಕ್ಕೇಡಿ ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಪೂಜಾರಿ, ನಿಟ್ಟಡೆ ಗ್ರಾಮ ಸಮಿತಿ ಅಧ್ಯಕ್ಷ ಸ್ಟೀವನ್ ಮೊನೀಸ್, ಬೂತ್ ಅಧ್ಯಕ್ಷ ನವೀನ್ ಅಮೈ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.