25.7 C
ಪುತ್ತೂರು, ಬೆಳ್ತಂಗಡಿ
April 22, 2025
Uncategorizedರಾಜಕೀಯ

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

ಬೆಳ್ತಂಗಡಿ: ಇಂದು ಗುರುವಾಯನಕೆರೆಯ ಶಕ್ತಿನಗರದಲ್ಲಿ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ.

ಸಮಾವೇಶದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚೆಲುವರಾಯ ಸ್ವಾಮಿ , ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಹತ್ತಾರು ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಕ್ಸ್ ಗಳನ್ನು ಅಳವಡಿಸಲಾಗಿತ್ತು.

ಕಳೆದ ರಾತ್ರಿ ಗುರುವಾಯನಕೆರೆ ಎಂಬಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಘಟನೆಯನ್ನು ಖಂಡಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ” ಪಕ್ಷದ ಬೆಳವಣಿಗೆಯನ್ನು ಸಹಿಸದೆ ಬಿಜೆಪಿ ಕಾರ್ಯಕರ್ತರು ಹತಾಶೆಯಿಂದ ಈ ಕಾರ್ಯ ನಡೆಸಿದ್ದಾರೆ. ಇಂತಹ ಕಾರ್ಯದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಮತ್ತು ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ. ನೀವು ಚಿವುಟಿದಷ್ಟು ನಾವು ಚಿಗುರುತ್ತೇವೆ ಇಂದಿನ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ ಎಂದಿದ್ದಾರೆ.

Related posts

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya
error: Content is protected !!