September 6, 2026
Uncategorized

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

ಬೆಳ್ತಂಗಡಿ : ಮೇಲಂತಬೆಟ್ಟು ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಬೆಳ್ತಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಮರ ಕಡಿಯಲು ಬಳಸಿದ
ಸೊತ್ತು ಸಹಿತಮರವನ್ನು ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಹಿಟಾಚಿ ಬಳಸಿ ರಸ್ತೆ ನಿರ್ಮಾಣ ಮಾಡಿ ಬೆಳೆಬಾಳುವ ಮರಗಳನ್ನು ಕಡಿದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್.ಟಿ.ಎಮ್ ನೇತೃತ್ವದ ತಂಡ ಏ.16 ರಂದು ಸಂಜೆ ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡು ಬೆಳ್ತಂಗಡಿ ನ್ಯಾಯಾಲಯ ಅನುಮತಿ ಪಡೆದು ಏ.19 ರಂದು ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಾಳಿ ವೇಳೆ ಸಾಗಾಟ ಮಾಡಲು ಕಡಿದು ದಾಸ್ತಾನು ಮಾಡಿದ್ದ ಸುಮಾರು 3 ಲಕ್ಷ ಮೌಲ್ಯದ ವಿವಿಧ ಜಾತಿಯ 14.500 ಮೀಟರ್ ಮರಗಳು, 30 ಲಕ್ಷ ಮೌಲ್ಯದ ಒಂದು ಸಾನಿ ಕಂಪನಿಯ ಹಿಟಾಚಿ ಮೇಷಿನ್, 60 ಸಾವಿರ ಮೌಲ್ಯದ ಒಂದು ಮರ ಕಟ್ಟಿಂಗ್ ಮಾಡುವ ಮೆಷಿನ್,15 ಸಾವಿರ ಮೌಲ್ಯದ ಒಂದು ಕಬ್ಬಿಣದ ಸಂಕೋಲೆ ಸೇರಿ ಒಟ್ಟು 33,75,000 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಕ್ಕೆ ಸಂಬಂಧಿಸಿದಂತೆ ನಾರಾವಿ ಗ್ರಾಮದ ಡೊಂಕಬೆಟ್ಟು ನಿವಾಸಿ ಪ್ರಕಾಶ್ ಪೂಜಾರಿ ಮತ್ತು ಹಿಟಾಚಿ ಮಾಲಕ & ಅಪರೇಟರ್ ಕಾರ್ಕಳ ತ ನೂರಲ್ಬೆಟ್ಟು ಗ್ರಾಮದ ನಿವಾಸಿ ಕರುಣಾಕರ ಭಂಡಾರಿ ವಿರುದ್ಧ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್.ಟಿ.ಎನ್, ಡಿ.ಆರ್‌ಎಫ್.ಒ ಕೆ.ರವೀಂದ್ರ ನಾಯ್ಕ್, ಡಿ.ಆರ್.ಎಫ್.ಒ ಸಂದೀಪ್(ವಿಶೇಷ ಪತ್ತೆ ದಳ), ಅರಣ್ಯ ಪಾಲಕ ಪರಶುರಾಮ, ಗಸ್ತು ಅರಣ್ಯ ಪಾಲಕ ಪ್ರತಾಪ್, ವಾಹನ ಚಾಲಕ ಕುಶಲಪ್ಪ ಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya
error: Content is protected !!