April 21, 2025
Uncategorized

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

ಬೆಳ್ತಂಗಡಿ : ಮೇಲಂತಬೆಟ್ಟು ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಬೆಳ್ತಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಮರ ಕಡಿಯಲು ಬಳಸಿದ
ಸೊತ್ತು ಸಹಿತಮರವನ್ನು ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಹಿಟಾಚಿ ಬಳಸಿ ರಸ್ತೆ ನಿರ್ಮಾಣ ಮಾಡಿ ಬೆಳೆಬಾಳುವ ಮರಗಳನ್ನು ಕಡಿದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್.ಟಿ.ಎಮ್ ನೇತೃತ್ವದ ತಂಡ ಏ.16 ರಂದು ಸಂಜೆ ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡು ಬೆಳ್ತಂಗಡಿ ನ್ಯಾಯಾಲಯ ಅನುಮತಿ ಪಡೆದು ಏ.19 ರಂದು ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಾಳಿ ವೇಳೆ ಸಾಗಾಟ ಮಾಡಲು ಕಡಿದು ದಾಸ್ತಾನು ಮಾಡಿದ್ದ ಸುಮಾರು 3 ಲಕ್ಷ ಮೌಲ್ಯದ ವಿವಿಧ ಜಾತಿಯ 14.500 ಮೀಟರ್ ಮರಗಳು, 30 ಲಕ್ಷ ಮೌಲ್ಯದ ಒಂದು ಸಾನಿ ಕಂಪನಿಯ ಹಿಟಾಚಿ ಮೇಷಿನ್, 60 ಸಾವಿರ ಮೌಲ್ಯದ ಒಂದು ಮರ ಕಟ್ಟಿಂಗ್ ಮಾಡುವ ಮೆಷಿನ್,15 ಸಾವಿರ ಮೌಲ್ಯದ ಒಂದು ಕಬ್ಬಿಣದ ಸಂಕೋಲೆ ಸೇರಿ ಒಟ್ಟು 33,75,000 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಕ್ಕೆ ಸಂಬಂಧಿಸಿದಂತೆ ನಾರಾವಿ ಗ್ರಾಮದ ಡೊಂಕಬೆಟ್ಟು ನಿವಾಸಿ ಪ್ರಕಾಶ್ ಪೂಜಾರಿ ಮತ್ತು ಹಿಟಾಚಿ ಮಾಲಕ & ಅಪರೇಟರ್ ಕಾರ್ಕಳ ತ ನೂರಲ್ಬೆಟ್ಟು ಗ್ರಾಮದ ನಿವಾಸಿ ಕರುಣಾಕರ ಭಂಡಾರಿ ವಿರುದ್ಧ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್.ಟಿ.ಎನ್, ಡಿ.ಆರ್‌ಎಫ್.ಒ ಕೆ.ರವೀಂದ್ರ ನಾಯ್ಕ್, ಡಿ.ಆರ್.ಎಫ್.ಒ ಸಂದೀಪ್(ವಿಶೇಷ ಪತ್ತೆ ದಳ), ಅರಣ್ಯ ಪಾಲಕ ಪರಶುರಾಮ, ಗಸ್ತು ಅರಣ್ಯ ಪಾಲಕ ಪ್ರತಾಪ್, ವಾಹನ ಚಾಲಕ ಕುಶಲಪ್ಪ ಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya
error: Content is protected !!