


ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ನೂತನವಾಗಿ ನಿರ್ಮಿಸಲಾದ ಕಲ್ಯಾಣ ಮಂಟಪಗಳಾದ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ, ಶ್ರೀ ಗೌರೀಶಂಕರ ಸಮುಚ್ಚಯವನ್ನು ಎ.೨೦ರಂದು ಸಂಜೆ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಗಳು ಮತ್ತು ಜಲ ಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿ ಲೋಕಾರ್ಪಣೆಗೈದರು.

ನಂತರ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜ್ಞಾನವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಉಜಿರೆ ಎಸ್‌ಡಿಎಂ ಎಜ್ಯಕೇಶನಲ್ ಸೊಸೈಟಿ ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್ ಭಾಗವಹಿಸಿದ್ದರು.



ಈ ಸಂದರ್ಭದಲ್ಲಿ ಕಟ್ಟಡ ಅಭಿಯಂತರ ಮಂಜುಕೀತ೯ನ್, ಕಾಮಗಾರಿ ವ್ಯವಸ್ಥಾಪಕ ಯಶೋಧರ, ಕಟ್ಟಡ ಮೇಲ್ವಿಚಾರಕ ನಿಖಲ್ ಕುಮಾರ್ ಇವರನ್ನು ಸನ್ಮಾನಿಸಲಾಯಿತು.

ಉಜಿರೆ ಎಸ್‌ಡಿಎಂ ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಕು.ಚಿನ್ಮಯಿ
ಅನ್ನಪೂರ್ಣ ಛತ್ರ ವ್ಯವಸ್ಥಾಪಕ ಜಿ.ಸುಬ್ರಹ್ಮಣ್ಯ ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಡಿ.ಎಂ.ಸಿ ಇಂಜಿನಿಯರ್ ಯಶೋಧರ ಧನ್ಯವಾದವಿತ್ತರು.