September 6, 2026
ಅಪರಾಧ ಸುದ್ದಿ

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ; ಉಜಿರೆಯಲ್ಲಿ
ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ
ಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎ.19ರಂದು ಪ್ರಕರಣ ದಾಖಲಿಸಲಾಗಿದೆ.

ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಎಸ್. ಐ ಮುರಳೀಧರ ನಾಯ್ಕ ಕೆ.ಜಿ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಪುನೀತ್ ಕೇರೆಹಳ್ಳಿ ಅವರು ಉಜಿರೆಗೆ ಬಂದರೆ ಉಜಿರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಶಾಂತಿ ಭಂಗ ಉಂಟುಮಾಡುವ ಸಾಧ್ಯತೆ ಇದ್ದ ಕಾರಣ ದ.ಕ ಜಿಲ್ಲಾಧಿಕಾರಿಯವರು ಸರ್ವಜನಿ ಹಿತದೃಷ್ಟಿಯಿಂದ ಪುನೀತ್ ಕೇರೆಹಳ್ಳಿ ಗೆ ಜಿಲ್ಲೆಯ ಸರಹದ್ದಿನೊಳಗೆ ಪ್ರವೇಶಿಸದಂತೆ ಕಲಂ163 ಬಿ.ಎನ್.ಎಸ್ 2023 ರಂತೆ ನಿರ್ಭಂಧಿಸಿ ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಆದರೆ ಆದೇಶವನ್ನು ಉಲ್ಲಂಘಿಸಿ ಶನಿವಾರ ಸಂಜೆಯ ವೇಳೆ ಉಜಿರೆಯ ಎಸ್‌.ಡಿ.ಎಂ ಕಾಲೇಜಿನ ಬಳಿ ಸಾರ್ವಜನಿಕ ರಸ್ತೆಗೆ ಬಂದಾಗ ಮಹೇಶ್‌ ಶೆಟ್ಟಿ ತಿಮರೋಡಿಯ ಬೆಂಬಲಿಗರಾದ ಅನಿಲ್‌ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಹಾಗೂ ಇತರರು ಗುಂಪು ಸೇರಿಕೊಂಡು ಉಜಿರೆ ಎಸ್.ಡಿ.ಎಂ ಕಾಲೇಜಿನ ಎದುರು ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ತರುವ ಉದ್ದೇಶದಿಂದ ಪುನೀತ್ ಕೇರೆಹಳ್ಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸುಗಮ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya
error: Content is protected !!