ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಎ.20ರಂದು ಉಜಿರೆಯ ಕುಂಜರ್ಪದಲ್ಲಿ ವಿದ್ಯುದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ 3ನೇ ವರ್ಷದ ಯಕ್ಷಗಾನ ಬಯಲಾಟ ನಡೆಯಿತು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿವೃತ್ತಿಯನ್ನು ಹೊಂದಿದ ಯೋಧ ಕರುಣಾಕರ ಶೆಟ್ಟಿ ಗೋಳಿತೊಟ್ಟು ರವರನ್ನು ಗೌರವಿಸಲಾಯಿತು. ಹಾಗೂ ಕಳೆದ ಕೆಲ ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಸುರೇಂದ್ರ ರವರ ಹೆಚ್ಚಿನ ಚಿಕಿತ್ಸೆಗೆ ಧನ ಸಹಾಯವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನೀಲ್ ಕುಮಾರ್ ಅಂತರ, ಕಾರ್ಯದರ್ಶಿ ಮನೋಜ್ ಕುಂಜರ್ಪ, ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನ ಅಭಿಮಾನಿಗಳು ಉಪಸ್ಥಿತರಿದ್ದರು.