25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

ಮರೋಡಿ: ಮರೋಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯ ಪ್ರಯುಕ್ತ ಶ್ರೀಗುರುಪೂಜೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಎ.18 ರಂದು ಪೊಸರಡ್ಕ ಶ್ರೀ ದೇವಿಪ್ರಸಾದ್‌ (ಮಹಾಬಲ ಸುವರ್ಣರ) ಮನೆ ವಠಾರದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ ಕನರೊಟ್ಟು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನಾರಾಯಣ ಗುರುಗಳ ಸಂದೇಶದಂತೆ ಸಮಾಜದ ಏಳಿಗೆಗೆ ಸಂಘಟನೆ ಅಗತ್ಯ. ಸಂಘಟನೆಗೆ ಶಕ್ತಿ ತುಂಬುವ ಕೆಲಸವನ್ನು ಸಮಾಜ ಬಾಂಧವರು ಮಾಡಬೇಕು ಎಂದು ಹೇಳಿದರು.

ಎಚ್ ಡಿಎಫ್ ಸಿ ಬ್ಯಾಂಕ್ ನ ಉಡುಪಿ ಜಿಲ್ಲಾ ಮುಖ್ಯಸ್ಥ ರವೀಂದ್ರ ಅಂಚನ್ ಮಾತನಾಡಿ, ವಿದ್ಯೆಯೇ ಮನುಷ್ಯನ ಸಂಪತ್ತು. ವಿದ್ಯೆಯಿಂದ ಸಮಾಜದ ಪರಿವರ್ತನೆ ಸಾಧ್ಯವಿದೆ. ಮಕ್ಕಳಿಗೆ ಉನ್ನತ ಶಿಕ್ಷಣವನ್ನು ನೀಡುವ ಕೆಲಸವನ್ನು ಪೋಷಕರು ಮಾಡಬೇಕು. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಹಾಯಹಸ್ತ ನೀಡುತ್ತೇನೆ ಎಂದು ಭರವಸೆ ನೀಡಿದರು.

ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸಂಘದ ಸ್ಥಾಪಕಾಧ್ಯಕ್ಷ ರತ್ನಾಕರ ಬುಣ್ಣಾನ್‌ ಮಾತನಾಡಿ, ಸಂಘಟನೆಯಿಂದ ಸಮಾಜಕ್ಕೆ ಶಕ್ತಿ ಲಭಿಸುತ್ತದೆ. ಬಲಿಷ್ಠ ಸಂಘಟನೆಯಿದ್ದರೆ ಸಮಾಜದ ಬೇಡಿಕೆ ಈಡೇರಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಮರೋಡಿಯ ಬಿಲ್ಲವ ಸಂಘಟನೆಯಿಂದ ಈಗಾಗಲೇ ಸಾಕಷ್ಟು ಸಮಾಜಪರ ಚಟುವಟಿಕೆ ಮಾಡಲಾಗಿದೆ. ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಮಾಡುತ್ತಿದೆ ಎಂದರು.‌

ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಶ್ರೀಮತಿ ಶಕುಂತಳಾ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ವಿದ್ಯಾನಂದ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಶ್ರೀಮತಿ ಸುಮಿತ್ರಾ, ಯುವ ಬಿಲ್ಲವ ವೇದಿಕೆ ಕಾರ್ಯದರ್ಶಿ ಅನಿಲ್‌ ಇದ್ದರು.

ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಪೆರಾಡಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಸುರೇಶ್ ಅಂಚನ್, ದಾನಿ ರವೀಂದ್ರ ಅಂಚನ್, ಸಾಧಕ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಶಾಂತ್ ಮರೋಡಿ, ಮೋಹನ್ ಮರೋಡಿ, ಕುಸ್ತಿಪಟು ಕಾರ್ತಿಕ್ ಪಲಾರಗೋಳಿ, ಮರೋಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀಮತಿ ಗೀತಾ, ಶ್ರೀಮತಿ ಪೂರ್ಣಿಮಾ, ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ವಿದ್ಯಾರ್ಥಿಗಳಾದ ಜಿತೇಶ್ ಪೂಜಾರಿ ಕುಡ್ಯಾರೊಟ್ಟು, ನಿರೀಕ್ಷಾ ಎನ್. ಪೂಜಾರಿ, ನಿರೀಕ್ಷಾ, ಸುದೀಕ್ಷಾ, ಸಹನಾ ಕಂಬಳದಡ್ಡ, ಪ್ರಿಯಾ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಯಶೋಧರ ಬಂಗೇರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!