ಬಂದಾರು: ಶ್ರೀ ಕ್ಷೇತ್ರ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಹಾಗೂ ಶ್ರೀ ಚಾಮುಂಡೇಶ್ವರಿ ಅಮ್ಮನವರ ವರ್ಷಾವಧಿ ಜಾತ್ರಾ ಮಹೋತ್ಸವವು ಎ.21 ಮತ್ತು 22ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಎ.21ರಂದು ಬೆಳಿಗ್ಗೆ 6ರಿಂದ ಸಂಜೆ ಗಂಟೆ 7ರ ತನಕ ಅರ್ಧ ಏಕಾಹ ಭಜನಾ ಕಾರ್ಯಕ್ರಮ ಜರುಗಲಿದೆ.ಎ.22ರಂದು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿಶ್ರೀ ಜ್ಞಾನಶಕ್ತಿ ಸುಬ್ರಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಸಂಜೆ 6-30ಕ್ಕೆ ಹರಿ ದರ್ಶನ ಯಕ್ಷಗಾನ ಬಯಲಾಟ ನಡೆಯಲಿದೆ.