ನಡ: ನಡ ಗ್ರಾಮದ ನರಸಿಂಹ ಗಡ ಕ್ಷೇತ್ರದಲ್ಲಿ ಮೇ 4 ರಂದು ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣದ ಆಮಂತ್ರಣ ಪತ್ರಿಕೆಯನ್ನು ತಾಲೂಕಿನ ಪ್ರಮುಖರಿಗೆ ವಿತರಿಸಲಾಯಿತು.

ಶ್ರೀನಿವಾಸ ಕಲ್ಯಾಣೋತ್ಸವವನ್ನು ಬಹಳ ವಿಜ್ರಂಭಣೆಯಿಂದ ನಡೆಸುವ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸಲಾಯಿತು. ಮೇ 3 ಹಾಗು 4 ರಂದು ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದ್ದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಯಿತು. ಕಲ್ಯಾಣೋತ್ಸವವು ಶಾಸಕರು ಹಾಗೂ ಕಲ್ಯಾಣೋತ್ಸವ ಸಮಿತಿಯ ಗೌರವ ಅಧ್ಯಕ್ಷ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜರುಗಲಿದೆ.
ಈ ಸಂದರ್ಭದಲ್ಲಿ ಕಲ್ಯಾಣೋತ್ಸವ ಸಮಿತಿಯ ಗೌರವ ಸಲಹೆಗಾರ ಶಶಿಧರ್ ಶೆಟ್ಟಿ ಬರೋಡ, ಗೌರವ ಅಧ್ಯಕ್ಷ ಹರೀಶ್ ಪೂಂಜ, ಸಮಿತಿಯ ಕೋಶಾಧ್ಯಕ್ಷರುಗಳಾದ ಪುರುಷೋತ್ತಮ ಶೆಣೈ, ಚಂದ್ರಶೇಖರ ಬೋಜಾರ , ಉಪಾಧ್ಯಕ್ಷ ಅಜಿತ್ ಆರಿಗ ಹಾಗೂ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ,ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನವೀನ್ ನೆರಿಯ ಉಪಸ್ಥಿತರಿದ್ದರು.