ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಸಂಸ್ಥೆಯು, ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರು ಮತ್ತು ಬೆಂಗಳೂರಿನ ಜಿ ಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಕಾರದೊಂದಿಗೆ ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್(OT) ಸುಮಾರು 9 ಲಕ್ಷಕ್ಕೂ ಅಧಿಕ ಮೊತ್ತದಲ್ಲಿ ಸಂಪೂರ್ಣವಾಗಿ ನವೀಕರಣಗೊಳಿಸಿದ್ದು ಇದರ ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ತಾಲೂಕು ಪಶು ಆಸ್ಪತ್ರೆಯ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿ ಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ರೋ. ಜಗದೀಶ್ ಮುಗುಳಿ ಮತ್ತು ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರಿನ ಅಧ್ಯಕ್ಷೆ ರೋ. ಸುಪ್ರಿಯಾ ಖಾಂಡರಿ ರಿಬ್ಬನ್ ಎಳೆದು ನಾಮ ಫಲಕ ಅನಾವರಣ ಗೊಳಿಸುವ ಮೂಲಕ ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಗೇ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಮಾತಾನಾಡಿ ಸಮಾಜದ ಮೇಲಿನ ಕಾಳಜಿ ಮತ್ತು ಅಭಿವೃದ್ಧಿಯ ದೂರದೃಷ್ಟಿತ್ವ ಇದ್ದುದರಿಂದ ಈ ಕಾರ್ಯ ಯಶಸ್ವಿಯಾಗಿದೆ. ಒಂದು ಸರ್ಕಾರಿ ಪಶು ವೈದ್ಯಕೀಯ ಚಿಕಿತ್ಸಾಲಯವನ್ನು ಸಂಘ ಸಂಸ್ಥೆಯೊಂದು ಅಭಿವೃದ್ಧಿ ಪಡಿಸಿರುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮೊದಲ ಉದಾಹರಣೆ.ಈ ಕಾರ್ಯ ಇತರೆ ಸಂಘ ಸಂಸ್ಥೆಗಳಿಗೆ ಮಾದರಿ. ಈಗೀನ ಸಂದರ್ಭದಲ್ಲಿ ಇಲ್ಲಾ ಸೇವಾ ಕಾರ್ಯಗಳನ್ನು ಸರ್ಕಾರದ ವತಿಯಿಂದ ಮಾಡಲು ಅಸಾಧ್ಯವಾಗಿದೆ. ಇಂತಹ ಸಂದರ್ಭದಲ್ಲಿ ರೋಟರಿಯಂತ ಸಂಘ ಸಂಸ್ಥೆಗಳು ಜೊತೆ ಸೇರಿದಾಗ ಸ್ವಾಸ್ಥ್ಯಸಮಾಜ ನಿರ್ಮಾಣವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪ್ ಸಿಂಹ ನಾಯಕ್ , ಕಾರ್ಯದರ್ಶಿ ರೋ ನರಸಿಂಹನ್ ಕಣ್ಣನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ. ಪೂರನ್ ವರ್ಮ, ಕಾರ್ಯದರ್ಶಿ ರೋ. ಸಂದೇಶ್ ಕುಮಾರ್ ರಾವ್, ಡಾ. ಅರುಣ್ ಕುಮಾರ್ ಶೆಟ್ಟಿ ಉಪ ನಿರ್ದೇಶಕರು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮಂಗಳೂರು, ಡಾ. ಶಿವಣ್ಣ ಜಂಟಿ ನಿರ್ದೇಶಕರು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮಂಗಳೂರು, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಸೇರಿದಂತೆ ಇಂದಿರಾನಗರ ಬೆಂಗಳೂರು ಮತ್ತು ಬೆಳ್ತಂಗಡಿ ರೋಟರಿಯ ಸರ್ವ ಸದಸ್ಯರು ಹಾಗು ತಾಲೂಕು ಪಶು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ರವಿಕುಮಾರ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಜಿ ಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ರೋ. ಜಗದೀಶ್ ಮುಗುಳಿ, ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರಿನ ಅಧ್ಯಕ್ಷೆ ರೋ. ಸುಪ್ರಿಯಾ ಖಾಂಡರಿ, ಕಾರ್ಯದರ್ಶಿ ರೋ ನರಸಿಂಹನ್ ಕಣ್ಣನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ. ಪೂರನ್ ವರ್ಮ, ಕಾರ್ಯದರ್ಶಿ ರೋ. ಸಂದೇಶ್ ಕುಮಾರ್ ರಾವ್ ರವರನ್ನು ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಬೆಳ್ತಂಗಡಿ ತಾಲೂಕಿ ಪಶು ಪಾಲನಾ ಆಸ್ಪತ್ರೆಯ ವತಿಯಿಂದ ಶಾಸಕ ಹರೀಶ್ ಪೂಂಜ ಮತ್ತು ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ತಾಲೂಕಿನ ಹಿರಿಯ ವಕೀಲ ರೋ. ಧನಂಜಯ ರಾವ್ ನಿರೂಪಿಸಿ, ತಾಲೂಕು ಪಶು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ರವಿಕುಮಾರ್ ವಂದಿಸಿದರು.

Related posts

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಜನ ನಾಯಕ, ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಲ್ಲವ ಅಭಿಮಾನಿ ಬಳಗದಿಂದ ಗೌರವಾಭಿನಂದನೆ

Suddi Udaya

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya
error: Content is protected !!