September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

ಮೂಡುಬಿದಿರೆ: ಕಲ್ಲಬೆಟ್ಟುವಿನ ನ್ಯೂ ವೈಬ್ರೆಂಟ್ ಕಾಲೇಜಿನ ಆವರಣದಲ್ಲಿ ನೀಟ್ ಲಾಂಗ್ ಟರ್ಮ್ ಡೇ 2025 ನಡೆಯಿತು.


ನ್ಯೂ ವೈಬ್ರೆಂಟ್ ಪಿ ಯು ಕಾಲೇಜು ತನ್ನ ಶೈಕ್ಷಣಿಕ ಸಾಧನೆಯೊಂದಿಗೆ ಉತ್ತಮ ಫಲಿತಾಂಶದೊಂದಿಗೆ ಹೆಸರುವಾಸಿಯಾಗುದರ ಜೊತೆಗೆ ಇದೀಗ ವಿನೂತನ ಕಾರ್ಯಕ್ರಮದ ಮೂಲಕ ಮಾದರಿ ಯಾಗಿದೆ .


ಹಳೆಯ ಕಾಲಕ್ಕೆ ಹೋಲಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ಇಂದು ಅವಕಾಶಗಳು ಹೆಚ್ಚುವೆ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ನಾವು ಸಾಧನೆಯ ಪಥದಲ್ಲಿ ಸಾಗಲು ಸಾಧ್ಯ ಇದನ್ನು ಮನಗಂಡು ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸರ್ಜಿತ ಹೊಸ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿರ್ದೇಶಕರಾದ ಚಂದ್ರಶೇಖರ ರಾಜೇ ಅರಸ್ ರವರು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಹಳೆಯ ತಪ್ಪುಗಳನ್ನು ತಿದ್ದುಕೊಂಡು ಏಕಾಗ್ರತೆಯಿಂದ ಅಭ್ಯಾಸದಲ್ಲಿ ತೊಡಗಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ನಿರ್ದೇಶಕರಾದ ಡಾ. ಎಸ್ ಎನ್ ವೆಂಕಟೇಶ್ ನಾಯಕ್ ರವರು ತಿಳಿಸಿದರು .

ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ಆರೋಗ್ಯವು ಅನಿವಾರ್ಯ ಮತ್ತು ಅವಶ್ಯಕ ಎಂದು ನಿರ್ದೇಶಕ ಯೋಗೀಶ್ ಬೆಡೇಕರ್ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು ಉತ್ತಮ ಕಾಲೇಜಿನಲ್ಲಿ ತರಬೇತಿ ಪಡೆಯುವುದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಮ್ಮನ್ನು ತಯಾರು ಗೊಳಿಸುವ ಉತ್ತಮ ವೇದಿಕೆ ಎಂದು ನಿರ್ದೇಶಕ ಶರತ್ ಗೋರೆ ಅವರು ತಿಳಿಸಿದರು. ತರಬೇತಿಯ ಜೊತೆ ಜೊತೆಗೆ ಹಲವಾರು ಪರೀಕ್ಷೆಗಳನ್ನು ಬರೆದಾಗ ನಮ್ಮಲ್ಲಿ ಆತ್ಮವಿಶ್ವಾಸ ದ್ವಿಗುಣಗೊಳ್ಳಲು ಸಾಧ್ಯವೆಂದು ನಿರ್ದೇಶಕ ಎಸ್ಎಂ ಭಾಷಾ ರವರು ನುಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಸುಭಾಷ್ ಝಾ ರವರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು, ನೀಟ್ ಲಾಂಗ್ ಟರ್ಮ್ ನ ಸಹಾಯಕ ಆಡಳಿತ ಅಧಿಕಾರಿ ವಿಜಯ್ ಕುಮಾರ್ ತೋನಶ್ಯಾಳ ಸ್ವಾಗತಿಸಿ, ನವೀನ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅಪ್ಸರ ಫ್ಯಾಷನ್ಸ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!